ಬೆಂಗಳೂರು: ಕನ್ನಡಪರ ಹೋರಾಟಗಾರನ ಮೇಲೆ ಹಲ್ಲೆ, ಪ್ರಾಣ ಬೆದರಿಕೆ ಆರೋಪದಡಿ ಸಾಮಾಜಿಕ ಕಾರ್ಯಕರ್ತ ವಸಂತ ಗಿಳಿಯಾರ್, ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ, ಹಾಗೂ ನಿರೂಪಕ ಕಿರಿಕ್ ಕೀರ್ತಿ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕನ್ನಡ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ಎಂಬುವರು ನಗರದ 48ನೇ ಎಸಿಜೆಎಂ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಕೋರ್ಟ್ ಸೂಚನೆಯಂತೆ ಇದೀಗ ಪೊಲೀಸರು ವಸಂತ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕಿರ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ದೂರುದಾರರು ಧರ್ಮಸ್ಥಳ ದೌರ್ಜನ್ಯ ಪ್ರಕರಣದಲ್ಲಿ ವಸಂತ ಗಿಳಿಯಾರ್ ಜತೆ ಚರ್ಚೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪರಸ್ಪರರ ನಡುವೆ ಅಭಿಪ್ರಾಯ, ಭಿನ್ನಾಭಿಪ್ರಾಯದ ವಾಗ್ವಾದ ನಡೆದಿತ್ತು.
ಕಾರ್ಯಕ್ರಮ ಮುಗಿದ ಬಳಿಕ ಹೊರಗಡೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಆಪ್ತರು ಸೇರಿ ನನ್ನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಅಲ್ಲದೆ, ಜೀವ ಬೆದರಿಕೆ ಹಾಕಿದ್ದರು ಎಂದು ಹರೀಶ್ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿದೆ.



