ಹಿರಿಯಡ್ಕ: ಮೋಟಾರ್ ಸೈಕಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಪಿರ್ಯಾದುದಾರ ದಿನೇಶ್ ಟೋಗು ರಾಠೋಡ್ (31), ತಂದೆ ಟೋಗು, ನಿವಾಸಿ ಸುವರ್ಣ ವಿದ್ಯಾಭೂಮಿ ಲೇಔಟ್, ಬಿಜಾಪುರ ರೋಡ್, ಅಥಣಿ ಇವರ ತಮ್ಮ ವಿಕಾಸ್ ಟೋಗು ರಾಠೋಡ್ (28) ಅವರು ಮಣಿಪಾಲದಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ದಿನಾಂಕ 26/12/2025 ರಂದು ರಾತ್ರಿ ಸುಮಾರು 7.50 ಗಂಟೆಗೆ, ಬುಕ್ಕಿಗಡ್ಡೆಯಿಂದ ಮಣಿಪಾಲಕ್ಕೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ, ತಮ್ಮ ಬಾಬ್ತು KA 49 Q 9961 ಸಂಖ್ಯೆಯ ಮೋಟಾರ್ ಸೈಕಲ್ ಅನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು, ಆತ್ರಾಡಿ ಪರೀಕ ಬೊಬ್ಬು ಸ್ವಾಮಿ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಮೋಟಾರ್ ಸೈಕಲ್ ಸಮೇತ ಬಿದ್ದ ವಿಕಾಸ್ ಅವರಿಗೆ ತಲೆಗೆ ತೀವ್ರ ಸ್ವರೂಪದ ಗಾಯವಾಗಿತ್ತು.
ಗಾಯಗೊಂಡ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 03/02/2026 ರಂದು ಮುಂಜಾನೆ ಸುಮಾರು 3.30 ಗಂಟೆಗೆ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 11/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 281 ಹಾಗೂ 106 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.





