Home Crime ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ನೀರು ಪಾಲು…!!

ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ನೀರು ಪಾಲು…!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ‌ಮಂಗಳೂರು‌ ನಗರದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಮನೋಹ‌ರ್ ಪುತ್ರನ್ (53) ಎಂದು ತಿಳಿದು ಬಂದಿದೆ.

ಸಾಯಂಕಾಲ ಸರಿ ಸುಮಾರು 6:30 ಸಮಯ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ..

ಮಾಹಿತಿ ಪಡೆದ ಪಣಂಬೂರು ಠಾಣಾ ಪೋಲಿಸರು ಸ್ಥಳೀಯರ ಸಹಾಯದಿಂದ ಹುಡುಕಾಟ ಆರಂಭಿಸಿ ಸುಮಾರು ರಾತ್ರಿ 9:30 ಸಮಯ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು..