ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್
ವಿವಿಧೋದ್ದೇಶ ಸಹಕಾರ ಸಂಘ ನಿ. ದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಲ್ತಾನ್ ಬತ್ತೇರಿಯ ಬೋಳೂರು ಬೇನಲ್ಲಿ ಶನಿವಾರ ರಾತ್ರಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು, ಸಮಾಜದ ಎಲ್ಲ ಕ್ಷೇತ್ರದಲ್ಲಿ ಛಾಯಾಚಿತ್ರಗ್ರಾಹಕರು ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಹಲವು ಘಟನೆಗಳನ್ನು ಅವರು ಸ್ಮರಣೀಯಗೊಳಿಸಿದ್ದಾರೆ ಎಂದರು.
ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ ಛಾಯಾಗ್ರಾಹಕರ ಕಾರ್ಯ ಅಭಿನಂದನೀಯ. ಸಮಾಜದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳಿಗೆ ಛಾಯಾಗ್ರಾಹಕರ ಉಪಸ್ಥಿತಿಯೇ ಮುಖ್ಯ ಎಂದರು.
ಎಂಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ|ಕೆ.ಪ್ರಕಾಶ್ ಶೆಟ್ಟಿ ಶಾಸಕರಾದ ಡಾ|ಭರತ್ ಶೆಟ್ಟಿ ಸುರೇಶ್ ಶೆಟ್ಟಿ ಗುರ್ಮೆ ಅವರು ಶುಭ ಹಾರೈಸಿದರು. ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷಸತೀಶ್ ಕುಂಪಲ, ದ.ಕ ಗಣ್ಯರಿಗೆ ಗೌರವಾಭಿನಂದನೆ
ಕಾರ್ಯಕ್ರಮದ ಸವಿನೆನೆಪಿನಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಎಂಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಕೆ.ಪ್ರಕಾಶ್ ಶೆಟ್ಟಿ ಅವರಿಗೆ ಗೌರವಾಭಿನಂದನೆ ಸಲ್ಲಿಸಲಾಯಿತು. ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ನಡೆಯಿತು.
ಉಡುಪಿ ಜಿಲ್ಲಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷ ಪದ್ಮ ಪ್ರಸಾದ್ ಜೈನ್, ಪ್ರಮುಖರಾದ ಯಶವಂತ ಮೆಂಡನ್ ಬೋಳೂರು, ಕರುಣಾಕರ ಕಾನಂಗಿ, ಹರೀಶ್ ರಾವ್ ಟಿ., ಸಂತೋಷ್ ಶೆಟ್ಟಿ ಆನಂದ್ ಎನ್.ಕುಂಪಲ, ಶ್ರೀನಿವಾಸ ನಾಯಕ್ ಇಂದಾಜೆ, ಪ್ರಶಾಂತ್ ಶಬರಿ, ಸುರೇಶ್ ಶೆಟ್ಟಿ ಜಗದೀಶ್ ಜೈನ್, ವಿಠಲ ಚೌಟ, ಜಗನ್ನಾಥ ಶೆಟ್ಟಿ ಹರೀಶ್ ಅಡ್ಯಾರ್, ದಾಮೋದರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರ ಸಂಘ ನಿ.ಮಂಗಳೂರು-ಉಡುಪಿ ಇದರ ಅಧ್ಯಕ್ಷಕೆ. ವಾಸುದೇವ ರಾವ್ ಸ್ವಾಗತಿಸಿ, ವಂದಿಸಿದರು.
