Home Crime ಉಡುಪಿ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ…!!

ಉಡುಪಿ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ…!!

ಉಡುಪಿ : ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಗಾಂಜಾ ಸೇವನೆ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿರುತ್ತದೆ. ಇದರಲ್ಲಿ ಒಟ್ಟು 35 ಅಪರಾಧಿಗಳ ವಿರುಧ್ದ ಕ್ರಮ ಕೈಗೊಳ್ಳಲಾಗಿರುತ್ತದೆ. ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಒಟ್ಟು 7 ಪ್ರಕರಣ ದಾಖಲಾಗಿದ್ದು, 7 ಆರೋಪಿತರುಗಳು, ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿದ್ದು, 6 ಆರೋಪಿತರುಗಳು, ಕಾರ್ಕಳ ನಗರ ಮತ್ತು ಮಲ್ಪೆ ಪೊಲೀಸ್‌ ಠಾಣೆಗಳಲ್ಲಿ ತಲಾ 5 ಪ್ರಕರಣ ದಾಖಲಾಗಿದ್ದು, ತಲಾ 5 ಆರೋಪಿತರುಗಳು, ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ 4 ಪ್ರಕರಣಗಳು ದಾಖಲಾಗಿದ್ದು, 4 ಆರೋಪಿತರುಗಳು, ಕಾಪು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಗಳಲ್ಲಿ ತಲಾ 2 ಪ್ರಕರಣ ದಾಖಲಾಗಿದ್ದು, ತಲಾ 2 ಆರೋಪಿತರುಗಳು, ಹಿರಿಯಡಕ, ಕೊಲ್ಲೂರು, ಕೋಟ ಮತ್ತು ಶಿರ್ವಾ ಪೊಲೀಸ್‌ ಠಾಣೆಗಳಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು, ಒಟ್ಟು 4 ಆರೋಪಿತರ ವಿರುದ್ದ ಕ್ರಮ ಕೈಗೊಳ್ಳಲಾಗಿರುತ್ತದೆ.

ಉಡುಪಿ ಜಿಲ್ಲೆಯಲ್ಲಿ ಗಾಂಜಾ ಸೇವನೆ ಮತ್ತು ಸರಭರಾಜು ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮವನ್ನು ನಿರಂತರ ಜರುಗಿಸಲಾಗುವುದು.

ಪೊಲೀಸರು ವಶಪಡಿಸಿಕೊಂಡ ಮಾದಕವಸ್ತುಗಳ ನಾಶ….

ದಿನಾಂಕ 09/10/2025ರಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427/- ಆಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಹರಿರಾಮ್‌ ಶಂಕರ್‌, ಐಪಿಎಸ್‌, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಡಾ. ಹರ್ಷಾ ಪ್ರಿಯಂವದಾ ಐ.ಪಿ.ಎಸ್. ಮತ್ತು ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ ಸದಸ್ಯರಾದ ಪ್ರಭು ಡಿ.ಟಿ. ಇತರ ಪೊಲೀಸ್‌ ಅಧಿಕಾರಿಯವರು ಮತ್ತು ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿಯ ಅಧಿಕಾರಿಯವರು ಉಪಸ್ಥಿತರಿದ್ದರು.

ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್‌ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ. ಇದರಲ್ಲಿ 2021ರ 01 ಪ್ರಕರಣ, 2024ರ 03 ಪ್ರಕರಣ ಹಾಗೂ 2025ರ 06 ಪ್ರಕರಣ ಒಳಗೊಂಡಿರುತ್ತದೆ. 2021ರ ಪಡುಬಿದ್ರಿ ಠಾಣೆಯ ಅಪರಾಧ ಕ್ರಮಾಂಕ 76/2021ರ ಪ್ರಕರಣವು ಸಜೆಯಲ್ಲಿ ಮುಕ್ತಾಯಗೊಂಡಿದ್ದು, ಆರೋಪಿತ ಅಬ್ದುಲ್‌ ರಹಿಮಾನ್‌ ಎಂಬಾತನಿಗೆ ಮಾನ್ಯ ನ್ಯಾಯಾಲಯವು ರೂಪಾಯಿ 8,000/- ಜುಲ್ಮಾನೆ ವಿಧಿಸಿ ಶಿಕ್ಷೆ ಪ್ರಕಟಿಸಿರುತ್ತದೆ. 2025ರ ಮಣಿಪಾಲ ಠಾಣೆಯ ಪ್ರಕರಣವು ತನಿಖೆಯಲ್ಲಿದ್ದು, ಉಳಿದ ಎಲ್ಲಾ ಪ್ರಕರಣಗಳು ಮಾನ್ಯ ನ್ಯಾಯಾಲಯದ ವಿಚಾರಣೆಯಲ್ಲಿ ಇರುತ್ತದೆ.