ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್ ಶೆಲ್ಟರ್ ಸಹಿತ ಪೂರಕ ಕಾಮಗಾರಿಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರ ಆರಂಭವಾಗಿದ್ದು, ಇನ್ನೂ ಹಲವಾರು ಪೂರಕ ಕಾಮಗಾರಿಗಳು ನಡೆಯಬೇಕಾಗಿದೆ. ಹೆದ್ದಾರಿಯ ಎರಡು ಬದಿಯಲ್ಲಿ ಬಸ್ ನಿಲ್ದಾಣ, ಶೌಚಾಲಯ, ಅಂಡರ್ ಪಾಸ್ ಸೇತುವೆ ಮೇಲೆ ಡಿವೈಡರ್ ಅಳವಡಿಕೆ, ತಡೆಗೋಡೆ ನಿರ್ಮಾಣ, ಸಂತೆಕಟ್ಟೆ ನೇಜಾರು ತಿರುವಿನಲ್ಲಿ ವೃತ್ತ ನಿರ್ಮಾಣ, ಎರಡೂ ಬದಿಯ ಸರ್ವೀಸ್ ರಸ್ತೆ ಆರಂಭಗೊಳ್ಳುವಲ್ಲಿ ಅಗಲೀಕರಣ, ಸರ್ವೀಸ್ ರಸ್ತೆಯ ಸುರಕ್ಷತಾ ಬೇಲಿ ವಿಸ್ತರಣೆ, ಸರ್ವೀಸ್ ರಸ್ತೆಯ ಬದಿಯಲ್ಲಿ ಇಂಟರ್ಲಾಕ್ ಅಳವಡಿಕೆ, ಆಶೀರ್ವಾದ್ ಲಕ್ಷ್ಮೀನಗರ ಜಂಕ್ಷನ್ ಅಗಲೀಕರಣ, ದಾರಿದೀಪ ಸಹಿತ ವಾಹನಗಳ ಸುಗಮ ಸಂಚಾರ, ಪಾದಚಾರಿಗಳ ಸುರಕ್ಷತಾ ದೃಷ್ಟಿಯಿಂದ ಅಗತ್ಯ ಕ್ರಮಗಳ ಬಗ್ಗೆ ತಕ್ಷಣ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಂದಾಪುರ ಭಾಗಕ್ಕೆ ತೆರಳುವ ಎಕ್ಸ್ ಪ್ರೆಸ್ ಬಸ್ಸುಗಳು ಸಂತೆಕಟ್ಟೆ ಜಂಕ್ಷನ್ ಗೆ ಬಾರದೆ ನೇರವಾಗಿ ಸಂಚರಿಸುವ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಬಸ್ಸುಗಳು ಸರ್ವೀಸ್ ರಸ್ತೆಯ ಮೂಲಕ ಸಂಚರಿಸುವಂತೆ ಕ್ರಮ ವಹಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸ್ಥಳೀಯ ಮುಖಂಡರಾದ ಉಮೇಶ್ ಶೆಟ್ಟಿ, ಕೃಷ್ಣ ದೇವಾಡಿಗ, ಸತೀಶ್ ನಾಯ್ಕ್, ಉದಯ, ಚಿನ್ಮಯ ಮೂರ್ತಿ, ರಾಮ ಪೂಜಾರಿ, ಪ್ರಸಾದ್ ರಾವ್, ಅಮಿತ್ ಪೂಜಾರಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಗರಸಭೆ ಪೌರಾಯುಕ್ತರಾದ ಮಹಾಂತೇಶ ಹಂಗರಗಿ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾ ಪ್ರಸಾದ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.




