Home Crime ಶಿರ್ವ : ಹಸುವಿನ ರುಂಡ ಪತ್ತೆ ಪ್ರಕರಣ : ಆರೋಪಿಯ ಬಂಧನ…!!

ಶಿರ್ವ : ಹಸುವಿನ ರುಂಡ ಪತ್ತೆ ಪ್ರಕರಣ : ಆರೋಪಿಯ ಬಂಧನ…!!

ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಗ್ರಾಮದ ಪಾಪನಾಶಿನಿ ಹೊಳೆಯ ಬದಿ ಜಾನುವಾರಿನ ಅವಶೇಷಗಳ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಶಿರ್ವದ ನಿವಾಸಿ ಆಶೋಕ ಎಂದು ತಿಳಿದು ಬಂದಿದೆ.

ಪ್ರಕರಣದ ವಿವರ: ದಿನಾಂಕ 01.06.2026 ರಂದು ಕಾಪು ತಾಲೂಕು ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗೆ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಇರುವ ಬಗ್ಗೆ ಮಾಹಿತಿಯ ಮೇರೆಗೆ ಶಿರ್ವ ಪೊಲೀಸ್‌ ಠಾಣಾ ಪಿಎಸ್‌ಐ ಮಂಜುನಾಥ ಮರಬದ ಇವರು ಸಹಾಯಕ ನಿರ್ದೇಶಕರು ಪಶು ವೈದ್ಯಕೀಯ ಆಸ್ಪತ್ರೆ ಕಾಪು ಹಾಗೂ ಜಿಲ್ಲಾ ಅಪರಾದ ಪರಿಶೀಲನಾ ಅಧಿಕಾರಿಗಳ ಸಮಕ್ಷಮ ಮಹಜರು ಮುಖೇನ ಜಾನುವಾರಿನ ಮೇಲ್ದವಡೆಯ ಭಾಗ, ಎರಡು ಗೆರಸುಗಳು ಮತ್ತು ಮಾಂಸ, ಹೊಟ್ಟೆಯ ಒಳಗಿನ ಭಾಗಗಳನ್ನುg ಸ್ಥಳದಿಂದ ಸ್ವಾಧೀನಪಡಿಸಿಕೊಂಡಿದ್ದು, ಈ ಬಗ್ಗೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 51/2026 ಕಲಂ: 4, 12 The Karnataka Prevention of slaughter and preservation of cattle Act 2020 ನಂತೆ ಪ್ರಕರಣ ದಾಖಲಾಗಿರುತ್ತದೆ.

ಸದರಿ ಪ್ರಕರಣದಲ್ಲಿ ಜಾನುವಾರನ್ನು ಕಡಿದು ಮಾಂಸ ಮಾಡಿ ಅವಶೇಷಗಳನ್ನು ಹೊಳೆಗೆ ಎಸೆದ ಆರೋಪಿ ಅಶೋಕ, ಪ್ರಾಯ: 52 ವರ್ಷ, ತಂದೆ: ದಿ: ಚಿಂಗ ಕೊರಗ, ವಾಸ: ಶಿರ್ವ ಪದವು, ಬಬ್ಬು ಸ್ವಾಮಿ ದೈವಸ್ಥಾನದ ಹತ್ತಿರ, ಪದವು, ಶಿರ್ವ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಎಂಬಾತನನ್ನು ಈ ದಿನ ದಿನಾಂಕ 05.06.2026 ರಂದು ಶಿರ್ವ ಗ್ರಾಮದ ಪದವು ಎಂಬಲ್ಲಿ ದಸ್ತಗಿರಿ ಮಾಡಿ ಆರೋಪಿಯು ತನ್ನ ವಶದಲ್ಲಿ ಇಟ್ಟುಕೊಂಡಿದ್ದ ಜಾನುವಾರಿನ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ ಅಸ್ತ್ರಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕರಾದ ವಿಜಯ ಪ್ರಸಾದ್‌ ಹಾಗೂ ಅಝಮತ್‌ ಆಲಿ ಪೊಲೀಸ್‌ ವೃತ್ತ ನಿರೀಕ್ಷಕರು ಕಾಪು ವೃತ್ತ ರವರ ನೇತ್ರತ್ವದಲ್ಲಿ ಶಿರ್ವ ಠಾಣಾ ಉಪ ನಿರೀಕ್ಷಕರಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ ಎಸ್, ಶಿರ್ವ ಪೊಲೀಸ್‌ ಠಾಣಾ ಸಿಬ್ಬಂದಿಯವರಾದ ಮಂಜುನಾಥ ಅಡಿಗ, ಕಿರಣ್‌, ಯಲ್ಲಾಲಿಂಗ, ಕಾಪು ಪೊಲೀಸ್‌ ಠಾಣೆಯ ರಘು ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ಸಿಬ್ಬಂದಿಯವರಾದ ರಹಿಮಾನ್‌, ಸಂದೇಶ್‌ ರವರು ಪತ್ತೆಕಾರ್ಯಾಚರಣೆ ನಡೆಸಿರುತ್ತಾರೆ.