Home Latest ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಿ : ವಿದ್ಯಾರ್ಥಿಗಳಿಗೆ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಕಿವಿಮಾತು

ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಿ : ವಿದ್ಯಾರ್ಥಿಗಳಿಗೆ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಕಿವಿಮಾತು

ಉಡುಪಿ: ಮಾನವ ತನ್ನ ಅನುಕೂಲಕ್ಕಾಗಿ ಮಿತಿಮೀರಿ ಪರಿಸರ ಬಳಸಿಕೊಳ್ಳುತ್ತಿದ್ದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ, ಪ್ರವಾಹ, ಬರ ಹಾಗೂ ಇನ್ನಿತರ ವಿಕೋಪ ಉಂಟಾಗುತ್ತಿದೆ. ಅವುಗಳನ್ನು ತಡೆಯುವಂತಾಗಲು ಸಸಿ ನೆಟ್ಟು ಪೋಷಿಸಬೇಕು. ಪರಿಸರದಲ್ಲಿ ಸ್ವಚ್ಛತೆ ಕಾಪಾಡಲು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಜನರಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಕಿವಿಮಾತು ಹೇಳಿದರು.

 

ಉಡುಪಿಯ ತೆಂಕನಿಡಿಯೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದದಲ್ಲಿ ಕಾಲೇಜಿನ ಐಕ್ಯುಎಸಿ, ಅಭ್ಯುದಯ ಸಮಾಜ ಕಾರ್ಯ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಶುಕ್ರವಾರ (ಜೂ.5) ಆಯೋಜಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

 

ವಿತರಿಸಿದ ಗಿಡಗಳನ್ನು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ನೆಟ್ಟರು. ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನ ಪ್ರಾಂಶುಪಾಲ ಡಾ. ಸೋಜನ್ ಕೆ.ಜಿ., ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಟಿ., ರುಖಿಯತ್, ಐಕ್ಯುಎಸಿ ಸಂಚಾಲಕ ಡಾ. ವಿಷ್ಣುಮೂರ್ತಿ ಪ್ರಭು, ಎನ್ಎಸ್ಎಸ್ ಅಧಿಕಾರಿ ಪ್ರಸಾದ್ ಎಚ್.ಎಂ., ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.

 

ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ. ಗಣೇಶಪ್ರಸಾದ್ ಜಿ. ನಾಯಕ್ ಕಾರ್ಯಕ್ರಮ ನಿರೂಪಿಸಿದರು.