Home Karavali Karnataka ಬ್ರಹ್ಮಾವರದಲ್ಲಿ ಅ. 11-12 ರಂದು ರೈತರಿಗಾಗಿ ಬೃಹತ್ ಕೃಷಿ ಮೇಳ 2025…!!

ಬ್ರಹ್ಮಾವರದಲ್ಲಿ ಅ. 11-12 ರಂದು ರೈತರಿಗಾಗಿ ಬೃಹತ್ ಕೃಷಿ ಮೇಳ 2025…!!

ಉಡುಪಿ : ರೈತರ ಅನುಕೂಲಕ್ಕಾಗಿ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಅಕ್ಟೋಬರ್ 11 ಮತ್ತು 12 ರಂದು ಎರಡು ದಿನಗಳ ಕೃಷಿ ಮೇಳ-2025 ಅನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಈ ಮೇಳ ನಡೆಯಲಿದೆ ಎಂದು ಕೃಷಿ ಡಿಪ್ಲೊಮಾ ಕಾಲೇಜು ಪ್ರಾಂಶುಪಾಲ ಡಾ. ಸುಧೀರ್ ಕಾಮತ್ ತಿಳಿಸಿದರು.

ಕೃಷಿಮೇಳದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವೆ ಆರ್. ಹೆಬ್ಬಾಳಕರ್ ಅವರು ನೆರವೇರಿಸಲಿದ್ದಾರೆ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಲ್ಲದೇ, ಕೃಷಿ ವಸ್ತು ಪ್ರದರ್ಶನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿಯ ಶಾಸಕ ಯಶಪಾಲ್ ಎ. ಸುವರ್ಣ ಅವರು ವಹಿಸಲಿದ್ದಾರೆ. ಈ ಮೇಳದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್, ಸಂಶೋಧನಾ ನಿರ್ದೇಶಕ ಡಾ. ಬಿ. ಎಂ. ದುಷ್ಯಂತ ಕುಮಾರ್, ಮತ್ತು ಕೃಷಿ ವಿಸ್ತರಣಾ ನಿರ್ದೇಶಕ ಡಾ. ಜಿ.ಕೆ. ಗಿರಿಜೇಶ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ವಿ. ಸುನಿಲ್ ಕುಮಾರ್, ಎಸ್. ಎಲ್. ಭೋಜೇಗೌಡ, ಗುರುರಾಜ ಶೆಟ್ಟಿ ಗಂಟಿಹೊಳೆ, ಎ. ಕಿರಣ ಕುಮಾರ ಕೊಡ್ಗಿ ಸೇರಿದಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಸಿಇಒ ಪ್ರತಿಕ್ ಬಾಯಲ್ ಮತ್ತು ಎಸ್‌ಪಿ ಹರಿರಾಮ್ ಶಂಕರ್ ಅವರು ಸಹ ಭಾಗವಹಿಸಲಿದ್ದಾರೆ ಎಂದು ಡಾ. ಸುಧೀರ್ ಕಾಮತ್ ಮಾಹಿತಿ ನೀಡಿದರು.