Home Latest ಹೆಜಮಾಡಿ ಟೋಲ್ ಗೇಟ್ ಬಳಿ ಕೇರಳದ ವಿದ್ಯಾರ್ಥಿಗಳಿಂದ ಪುoಡಾಟ : ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ

ಹೆಜಮಾಡಿ ಟೋಲ್ ಗೇಟ್ ಬಳಿ ಕೇರಳದ ವಿದ್ಯಾರ್ಥಿಗಳಿಂದ ಪುoಡಾಟ : ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ

 

ಕಾಪು : ಕೇರಳದ ವಿದ್ಯಾರ್ಥಿಗಳ ಗುಂಪೊಂದು ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ರಸ್ತೆ ಮಧ್ಯದಲ್ಲೇ ನೃತ್ಯ ಮಾಡಿ, ಪಟಾಕಿ ಸಿಡಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆ ನಡೆದಿದೆ.

 

ಉಡುಪಿಗೆ ಪ್ರವಾಸಕ್ಕೆಂದು ಕೇರಳದಿಂದ ಎರಡು ಬಸ್‌ಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

 

ಟೋಲ್ ಗೇಟ್ ಬಳಿ ಬಸ್‌ಗಳನ್ನು ನಿಲ್ಲಿಸಿದ ವಿದ್ಯಾರ್ಥಿಗಳು, ರಸ್ತೆಗಿಳಿದು ನೃತ್ಯ ಮಾಡಲು ಮತ್ತು ಪಟಾಕಿ ಸಿಡಿಸಲು ಆರಂಭಿಸಿದ್ದಾರೆ. ಇದರಿಂದಾಗಿ ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ವರದಿಯಾಗಿದೆ.

 

ಜನನಿಬಿಡ ಈ ರಸ್ತೆಯಲ್ಲಿ ವಿದ್ಯಾರ್ಥಿಗಳ ಈ ಬೇಜವಾಬ್ದಾರಿ ವರ್ತನೆಯು ಸಾರ್ವಜನಿಕರಲ್ಲಿ ಸುರಕ್ಷತೆಯ ಬಗ್ಗೆ ಆತಂಕ ಸೃಷ್ಟಿಸಿದೆ.

ವಿದ್ಯಾರ್ಥಿಗಳ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ