Home Crime ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : 7 ಮಂದಿ ವಶಕ್ಕೆ.?…!!

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : 7 ಮಂದಿ ವಶಕ್ಕೆ.?…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ‌ಮಂಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿಯಲಾಗಿದೆ.ಅವರ ವಿಚಾರಣೆ ನಡೆಯುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಬಗ್ಗೆ ವಿವರ ಹಾಗೂ ಅಧಿಕೃತ ಪ್ರಕಟಣೆ ಪೊಲೀಸ್ ಇಲಾಖೆಯಿಂದ ಇನ್ನಷ್ಟೇ ತಿಳಿದು ಬರಬೇಕಿದೆ.

ಪೊಲೀಸರು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.