ಮೂಡಬಿದಿರೆ: ಶ್ರೀ ಕ್ಷೇತ್ರ ಕೇಮಾರುವಿನ ಸಾಂದೀಪನಿ ಸಾಧನಾಶ್ರಮ ಮಠಕ್ಕೆ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾನುವಾರ ಭೇಟಿ ನೀಡಿದರು. ಅವರನ್ನು ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರು ಸ್ವಾಗತಿಸಿ ಆಶೀರ್ವದಿಸಿ ದೇವರ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸದರು ಶ್ರೀ ಕ್ಷೇತ್ರ ಕೇಮಾರು ಹಾಗೂ ನವೀಕರಣಗೊಳ್ಳುತ್ತಿರುವ ಕೊಲ್ಲೂರು ಶಾಖಾ ಮಠದ ಅಭಿವೃದ್ಧಿಗೆ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಸಹಕಾರಿ ಧುರೀಣ ದಯಾನಂದ ಪೈ, ಯುವ ಮೋರ್ಚಾದ ಅಧ್ಯಕ್ಷ ಕುಮಾರ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಭರತ್ ಶೆಟ್ಟಿ, ಪಾಲಡ್ಕ ಗ್ರಾ. ಪಂ. ನ ಮಾಜಿ ಉಪಾಧ್ಯಕ್ಷ ಸುಕೇಶ್ ಶೆಟ್ಟಿ ಕೇಮಾರು, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಇರುವೈಲು, ಪ್ರಮುಖರಾದ ವಿಠಲ್ ಮುಲ್ಕಿ, ಸುದರ್ಶನ್ ಆಚಾರ್ಯ ಕೇಮಾರು, ಜೀವಂಧರ್ ಶೆಟ್ಟಿಗಾರ್, ಚಂದ್ರ ಪೂಜಾರಿ, ಶಿವಪ್ರಸಾದ್ ಶೆಟ್ಟಿ, ರಂಜಿತ್ ಕೋಟ್ಯಾನ್, ಹರೀಶ್ ಪೂಜಾರಿ, ಶಾಶ್ವತ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.








