ಅಮೆರಿಕ : ಹಂಟಿಂಗ್ಟನ್ ಬೀಚ್ ಬಳಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಒಬ್ಬ ಬಾಲಕಿಯೂ ಸೇರಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹೆಲಿಕಾಪ್ಟರ್ ಕಡಲ ತೀರದ ಬಳಿ ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ತಕ್ಷಣ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್, ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.
ಈ ಘಟನೆ ಕುರಿತು ಫೆಡರಲ್ ಏವಿಯೇಶನ್ ಆಡಳಿತ ಮತ್ತು ನ್ಯಾಷನಲ್ ಟ್ರಾನ್ಸ್‌ಪೋರ್ಟ್ ಸೆಫ್ಟಿ ಬೋರ್ಡ್ ತನಿಖೆ ಆರಂಭಿಸಿದೆ.
ಹಂಟಿಂಗ್ಟನ್ ಬೀಚ್‌ನ ಕಡಲ ತೀರದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

