ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ರೈಲು ಹಳಿಯ ಬಳಿ ಸಂಭವಿಸಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದೀಪ್ ಭಂಡಾರಿ ಅವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ಹಾಗೂ ಎಲ್ಲರಿಗೂ ಹತ್ತಿರವಾಗಿದ್ದ ಸುದೀಪ್ ಅವರ ಆಕಸ್ಮಿಕ ಸಾವಿನ ಸುದ್ದಿ ಕೇಳಿ ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ಆಘಾತಗೊಂಡಿದ್ದಾರೆ.
ಸುದೀಪ್ ಭಂಡಾರಿ ಅವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.