ಉಡುಪಿ : ಜಿಲ್ಲೆಯ ಆರ್ ಟಿ ಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಬೆಳ್ಳಂಬೆಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ
ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಕ್ಷ್ಮೀ ನಾರಾಯಣ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದಾರೆ. ಕುಮುಟಾ ಹಾಗೂ ಪಡುಅಲೆವೂರು ನಲ್ಲಿರುವ ಸಂಬಂಧಿಕರ ಮನೆಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಉಡುಪಿಯಲ್ಲಿ ಬೆಳ್ಳಂ ಬೆಳ್ಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಅಲೆವೂರಿನಲ್ಲಿರುವ ಆರ್ ಟಿ ಓ ಬ್ರೋಕರ್ ರವಿ ಮನೆ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಕಡತಗಳನ್ನು ಪರಿಶೀಲಿಸಿದ್ದಾರೆ. ಇನ್ನು ಮಣಿಪಾಲದಲ್ಲೂ ಏಕ ಕಾಲದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಮಾಹಿತಿ ತಿಳಿದು ಬಂದಿದೆ. ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.