ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪ ನಿಡ್ಡೋಡಿ ಗ್ರಾಮದ ಮನೆ ಒಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಫೋಕ್ಸೊ ಕಾಯ್ದೆ ಅಡಿ ಪ್ರಕರಣದ ದಾಖಲಿಸಲಾಗಿದೆ.
ಬಂಧಿತ ಆರೋಪಿಗಳು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.