ಉಡುಪಿ : ವಿಶ್ವ ಪರಿಸರ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಖಾಸಗಿ ಪ್ರತಿಷ್ಠಾನ ವತಿಯಿಂದ ಕರ್ನಾಟಕ ರಾಜ್ಯದಾಧ್ಯಂತ 5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮದ ಅಂಗವಾಗಿ ದಿನಾಂಕ 08.06.2026 ರಂದು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಶ್ರೀ ಪುರುಷೋತ್ತಮ ರವರು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಹರಿರಾಂ ಶಂಕರ್ ಐ.ಪಿ.ಎಸ್ ರವರು ನೆರವೇರಿಸಿದ್ದು ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖಾ ಸಿಬ್ಬಂದಿಗಳು ಹಾಗೂ ಡಿಎಲ್‌ಎಸ್‌ಎ ಯ ಪಿ.ಎಲ್.ವಿ ಗಳು ಭಾಗವಹಿಸಿರುತ್ತಾರೆ.




