ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್‌ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟಿಸಲಾಗಿದೆ.
ಪಕ್ಷದ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿರುವ ಕುರಿತು ಆರೋಪಗಳು ಕೇಳಿಬಂದಿದ್ದು, ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿ ಪಕ್ಷದ ಹಿತಾಸಕ್ತಿ ಹಾಗೂ ಸಂಘಟನೆಯ ಶಿಸ್ತು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪಕ್ಷದ ಸಿದ್ಧಾಂತ, ಮೌಲ್ಯಗಳು ಮತ್ತು ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಪಕ್ಷದ ನಿಯಮಗಳು ಮತ್ತು ಶಿಸ್ತನ್ನು ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಹಾಗೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಕ್ಷದ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಈ ಕ್ರಮವು ಪಕ್ಷದ ಶಿಸ್ತು ಮತ್ತು ಸಂಘಟನೆಯ ಮೌಲ್ಯಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದ್ದು, ಕಾರ್ಯಕರ್ತರು ಪಕ್ಷದ ಆದರ್ಶಗಳು ಮತ್ತು ನಿಯಮಾವಳಿಗಳಿಗೆ ಬದ್ಧರಾಗಿರಬೇಕೆಂದು ಪಕ್ಷ ಮನವಿ ಮಾಡಿದೆ.




