ಉಡುಪಿ : ಕಲಾವಿದರು ನಿರಂತರ ಅಧ್ಯಯನ ಶೀಲರಾಗಬೇಕು. ಭಾರತದ ಸಾಂಸ್ಕೃತಿಕ ಪ್ರತಿನಿಧಿಗಳು ಎಂಬುದನ್ನು ತಾವು ಮರೆಯಬಾರದು. ಹಾಗಾಗಿ ಕಲೆಯ ಶ್ರೇಷ್ಠತೆಯನ್ನು ಅವರು ಮರೆಯಬಾರದು ಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮದರ್ಶಿ ಡಾ. ಜಿ. ಭೀಮೇಶ್ವರ ಜೋಶಿ ಹೇಳಿದರು.
ಅವರು ಶುಕ್ರವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಯಕ್ಷಗಾನ ಕಲಾರಂಗದ ಮೂಲಕ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಯಕ್ಷಗಾನ, ಜನಪದ, ಉದ್ಯಮ ಹೀಗೆ ವಿವಿಧ ಪ್ರಕಾರದ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಳೆದ 13 ವರ್ಷಗಳಿಂದ ತಮ್ಮ ಮಾತಾಪಿತರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿ ಯಕ್ಷಗಾನ ವಿದ್ವಾಂಸರನ್ನು ಗುರುತಿಸಿ ಅವರಿಗೆ ಪ್ರಧಾನ ಮಾಡುತ್ತಿರುವುದು ಅಭಿನಂದನೀಯ ಎಂದು ಅವರು ಶ್ಲಾಘಿಸಿದರು.
ಯಕ್ಷಗಾನ ಕಲಾರಂಗ ಯಕ್ಷಗಾನಕ್ಕೆ ಕಲಶಪ್ರಯವಾದ ಕಾರ್ಯಗಳನ್ನು ಮಾಡುತ್ತಿದೆ. ಕಲೆ, ಶಿಕ್ಷಣ, ಸಮಾಜ ಸೇವೆ ಮೂಲಕ ಕಲಾವಿದರ ಮನಸ್ಸುಗಳನ್ನು ಕಟ್ಟುವ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಯಕ್ಷಗಾನ ಕಲಾವಿದರು ತಾವು ಮಾಡುವ ಪಾತ್ರಗಳ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ಪಾತ್ರ ನಿರ್ವಹಿಸಬೇಕು. ನಮ್ಮ ಯಕ್ಷಗಾನದ ಸಾಧಕ ಕಲಾವಿದರು ಉತ್ತುಂಗಕ್ಕೇರಲು ಪಟ್ಟ ಶ್ರಮ ಪ್ರೇರಣೆಯಾಗಲಿ. ಕಲೆಯ ಮೂಲ ಸಿದ್ಧಾಂತಕ್ಕೆ ಧಕ್ಕೆಯಾಗದಂತೆ ಎಚ್ಚರ ಕಲಾವಿದರಿಗೆ ಇರಬೇಕು ಎಂದರು.
ವಿಶ್ರಾಂತ ಕುಲಪತಿ ಡಾ. ಬಿ. ಎ. ವಿವೇಕ ರೈ ಅವರು ಅಭಿನಂದನಾ ಮಾತುಗಳನ್ನಾಡಿ, ಯಕ್ಷಗಾನ ರಂಗ ಭಾಷೆ ಕೃತಿಯ ಮೂಲಕ ಯಕ್ಷಗಾನ ರಂಗದ ಸೈದ್ಧಾಂತಿಕ, ಅನ್ವಯಿಕ ಸೂಕ್ಷ್ಮ ಒಳನೋಟವನ್ನು ವಿದ್ವಾಂಸ ಡಾ. ಚಂದ್ರಶೇಖರ್ ದಾಮ್ಲೆ ಸಮಾಜದ ಮುಂದಿರಿಸಿದ್ದಾರೆ. ಇಂತಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಯಕ್ಷಗಾನ ಕಲಾರಂಗದ ಕಾರ್ಯ ಅಭಿನಂದನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು ಹಾಗೂ ಪ್ರಶಸ್ತಿಯ ರೂವಾರಿ ಡಾ .ತಲ್ಲೂರು ಶಿವರಾಮ ಶೆಟ್ಟಿ ಅವರು ಮಾತನಾಡಿ, ಸಂಪ್ರದಾಯಿಕ ಯಕ್ಷಗಾನ ಕಲೆ ಉಳಿಯಬೇಕು ಎನ್ನುವ ದೃಷ್ಟಿಯಿಂದ ಕಳೆದ 13ವರ್ಷಗಳಿಂದ ಸಾಂಸ್ಕೃತಿಕ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ಡಾ. ಚಂದ್ರಶೇಖರ ದಾಮ್ಲೆ ಅವರಿಗೆ 2026ನೇ ಸಾಲಿನ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಪವನ್
ಹೆಬ್ರಿ: ಪಿರ್ಯಾದಿ ಲಾಲ್ ಮುನ್ನಿ ದೇವಿ ಮೋತಿಯಾರ್ ಜಿಲ್ಲಾ. ಬಿಹಾರ ರಾಜ್ಯ ಇವರ ಗಂಡ ಹಿರಾಲಾಲ್ ಮಾಜಿ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 08/06/2026 ರಂದು ಮದ್ಯಾಹ್ನ 2.00 ಗಂಟೆ ಬಳಿಕ ಸಂಜೆ 6.00 ಗಂಟೆ ಮೊದಲು ಪಿರ್ಯಾದುದಾರರು ವಾಸ್ತವ್ಯ ಇರುವ ವರಂಗ ದಲ್ಲಿರುವ ಎಸ್.ಎನ್.ಸಿ ಕಂಪೆನಿಯ ವಾಸ್ತವ್ಯದ ಶೆಡ್ ನ ಪಕ್ಕದ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ: 16/2026 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.
ಕಿರಣ್ ಕೆರೆ, ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಟ್ರಸ್ಟಿಗಳಾದ ಗಿರಿಜಾ ಶಿವರಾಮ ಶೆಟ್ಟಿ, ತಲ್ಲೂರು ಶಿವಪ್ರಸಾದ್ ಶೆಟ್ಟಿ, ಸುನಿಲ್ ಕುಮಾರ್ ಶೆಟ್ಟಿ, ಪ್ರಶಸ್ತಿ ಪಡೆದ ಡಾ. ಚಂದ್ರಶೇಖರ್ ದಾಮ್ಲೆ ಮೊದಲಾದವರು ಉಪಸ್ಥಿತರಿದ್ದರು.
ಕಲಾರಂಗದ ಅಧ್ಯಕ್ಷ ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ನಾರಾಯಣ ಎಂ. ಹೆಗಡೆ ವಂದಿಸಿದರು.
ಫೋಟೋ: ಹಿರಿಯ ವಿದ್ವಾಂಸ ಡಾ. ಚಂದ್ರಶೇಖರ ದಾಮ್ಲೆ ಅವರಿಗೆ 2026ನೇ ಸಾಲಿನ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.




