Home Crime ಪುತ್ತೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ : ಆರೋಪಿಯ ಬಂಧನ…!!

ಪುತ್ತೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ : ಆರೋಪಿಯ ಬಂಧನ…!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕಬಕ ಗ್ರಾಮದ ಸಿಟಿಗುಡ್ಡೆ ನಿವಾಸಿ ಪ್ರವೀಣ್ (27) ಎಂದು ಗುರುತಿಸಲಾಗಿದೆ.

ಅ.12 ರಂದು ಪುತ್ತೂರು ನಿವಾಸಿ ಶ್ರೀಮತಿ ರೇವತಿ ಅವರ ಮನೆಯಲ್ಲಿ ಚಿನ್ನದ ಬಳೆ, ಕಿವಿಯೋಲೆ, ಚಿನ್ನದ ಸರ ಹಾಗೂ ನಗದು ಹಣವನ್ನು ಕಳವುಗೈದ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿತ್ತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆಮಾಡಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಕಳವು ಮಾಡಿದ ಚಿನ್ನಾಭರಣ ಹಾಗೂ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೊಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿಯಲಾಗಿದೆ.