Home Crime ಶ್ರೀಕೃಷ್ಣ ಮಠ ಪಾರ್ಕಿಂಗ್‌ನಲ್ಲಿ ಸೈಡ್ ಕೊಡುವ ವಿಚಾರಕ್ಕೆ ಮಾರಾಮಾರಿ…!!

ಶ್ರೀಕೃಷ್ಣ ಮಠ ಪಾರ್ಕಿಂಗ್‌ನಲ್ಲಿ ಸೈಡ್ ಕೊಡುವ ವಿಚಾರಕ್ಕೆ ಮಾರಾಮಾರಿ…!!

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಆಂಧ್ರ ಪ್ರದೇಶ ಮೂಲದ ಪ್ರವಾಸಿಗರು ಹಾಗೂ ಉಡುಪಿ ಮೂಲದ ಕಾರು ಚಾಲಕನ ನಡುವೆ ನಡೆದ ವಾಗ್ವಾದ ಮಾರಾಮಾರಿಗೆ ತಿರುಗಿದ ಘಟನೆ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ವಾಹನಕ್ಕೆ ದಾರಿ ಬಿಡುವ ವಿಚಾರವಾಗಿ ಎರಡೂ ಕಡೆಯವರ ನಡುವೆ ಮೊದಲು ಮಾತಿನ ಚಕಮಕಿ ನಡೆದಿದೆ. ಬಳಿಕ ಕಾರು ಚಾಲಕ ಸ್ಥಳದಿಂದ ತೆರಳಲು ಮುಂದಾದ ವೇಳೆ ಆಕ್ರೋಶಗೊಂಡ ಪ್ರವಾಸಿಗನೊಬ್ಬ ಕಾರಿನ ಮೇಲೆ ಕೋಲಿನಿಂದ ಹೊಡೆದಿದ್ದಾನೆ ಎನ್ನಲಾಗಿದೆ.

ಇದರಿಂದ ಕೋಪಗೊಂಡ ಕಾರು ಚಾಲಕ ಪ್ರವಾಸಿಗರೊಂದಿಗೆ ಘರ್ಷಣೆಗೆ ಇಳಿದಿದ್ದು, ಪರಿಸ್ಥಿತಿಯನ್ನು ಸಮಾಧಾನಪಡಿಸಲು ಬಂದಿದ್ದ ಮಹಿಳೆಯ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿದ್ದು, ಸ್ಥಳೀಯರು ಮತ್ತು ಸಾರ್ವಜನಿಕರು ಮಧ್ಯಪ್ರವೇಶಿಸಿ ಎರಡೂ ಕಡೆಯವರನ್ನು ಸಮಾಧಾನಪಡಿಸಿದ್ದಾರೆ. ಬಳಿಕ ಸಂಬಂಧಪಟ್ಟವರನ್ನು ಉಡುಪಿ ನಗರ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.

ಪ್ರಕರಣದ ಕುರಿತು ಉಡುಪಿ ನಗರ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.