Home Latest ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ : ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್…!!

ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ : ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್…!!

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್ 12 (ಶುಕ್ರವಾರ) ನಾಳೆ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ.

ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ.