ಉಡುಪಿ : ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕಾರ್ಕಳದ ಅಭಿಷೇಕ್ ಆಚಾರ್ಯನನ್ನು ಹನಿಟ್ರ್ಯಾಪ್ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ವಿಶ್ವಕರ್ಮ ಯುವ ಮಿಲನ ಸಂಘಟನೆಯ ಸ್ಥಾಪಕಾಧ್ಯಕ್ಷ ವಿಕ್ರಂ ಆಚಾರ್ಯ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಾರ್ಕಳದ ಯುವಕ ಅಭಿಷೇಕ್ ಆಚಾರ್ಯ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವಂತೆ ನಿರೀಕ್ಷಾ, ರಾಕೇಶ್, ರಾಹುಲ್ ಹಾಗೂ ತಸ್ಲೀಂ ಹನಿಟ್ರ್ಯಾಪ್ ಮಾಡಿ, ಅಭಿಷೇಕ್‌ನನ್ನು ಹಣಕ್ಕಾಗಿ ಪೀಡಿಸುತ್ತಿದ್ದರು. ಅಲ್ಲದೇ ಹಣ ನೀಡದೇ ಇದ್ದರೆ ಅಭಿಷೇಕ್‌ನ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸುತ್ತಿದ್ದರು. ಅಲ್ಲದೇ ಕೊಲೆಗೈಯ್ಯುವ ಬೆದರಿಕೆಯೊಡ್ಡುತ್ತಿದ್ದರು. ಇದರಿಂದ ಬೇಸತ್ತು ಅಭಿಷೇಕ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿ ತಕ್ಷಣ ಆರೋಪಿಗಳನ್ನು ಬಂಧಿಸಬೇಕೆಂದು ವಿಶ್ವ ಕರ್ಮ ಯುವ ಮಿಲನ್ ಸ್ಥಾಪಕಾಧ್ಯಕ್ಷ ವಿಕ್ರಂ ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ನೀನ್ ಆಚಾರ್ಯ, ಸುಬ್ರಹ್ಮಣ್ಯ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.



