ಬೆಂಗಳೂರು: ರಾಜಧಾನಿ ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಬೈಕಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಇಂದು ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಗೂಡ್ಸ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಓರ್ವ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ದ್ವಿಚಕ್ರ ವಾಹನಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಓರ್ವ ಮಹಿಳೆ, ಪುರುಷ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ.





