ಉಡುಪಿ: ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಬಲೈಪಾದೆ ಜಂಕ್ಷನ್ ಬಳಿ ಜಮಾಯಿಸಿದ ಕಾರ್ಯಕರ್ತರು ತಮಿಳುನಾಡು ಸರ್ಕಾರದ ನಿಲುವಿನ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.




ಈ ವೇಳೆ ಜೋಸೆಫ್ ವಿಜಯ್ ಅವರ ಭೇಟಿಯನ್ನು ವಿರೋಧಿಸಿ ಕಪ್ಪು ಬಾವುಟ ಪ್ರದರ್ಶನಕ್ಕೆ ಕಾರ್ಯಕರ್ತರು ಮುಂದಾದರು. ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ಸ್ಥಳಕ್ಕೆ ಆಗಮಿಸಿದ ಉಡುಪಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದು ಕರೆದೊಯ್ದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಬಲೈಪಾದೆ ಜಂಕ್ಷನ್ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.




