ಕೋಟ : ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆಯಲ್ಲಿ ಸಂಭವಿಸಿದೆ.
ಮಣೂರು ಗ್ರಾಮದ ನಿವಾಸಿ ನಟರಾಜ್ (36) ಮೃತ ಮೀನುಗಾರ ನಟರಾಜ್ ಬೋಟಿನಲ್ಲಿ ಮೀನುಗಾರಿಕೆಗೆ ನಿರ್ವಹಿಸುತ್ತಿದ್ದ ಸಂದರ್ಭ ಊಟ ಮಾಡಿ ಕೈ ತೊಳೆಯುವ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು ಸಹ ಕಾರ್ಮಿಕರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಬಳಿಕ ಫೆ.4ರಂದು ಬೆಳಿಗ್ಗೆ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



