ಸುಳ್ಯದಲ್ಲಿ ಅಟೋ ರಿಕ್ಷಾ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಅವರ ಪತ್ನಿ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
ಸುಳ್ಯ ಶಾಂತಿನಗರದ ಬೆಟ್ಟಂಪಾಡಿ ನಿವಾಸಿ ಅಟೋ ಚಾಲಕ ಜಬ್ಬಾರ್ (35) ಎಂಬವರು ಅ. 17ರ ರಾತ್ರಿ ನಿಧನ ಹೊಂದಿದ್ದರು. ಅವರು ಕೆಲ ತಿಂಗಳ ಹಿಂದೆಯಷ್ಟೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ಚಿಕಿತ್ಸೆ ಪಡೆದು, ಗುಣಮುಖರಾಗಿದ್ದರು.
ಇದೀಗ ಜಬ್ಬಾರ್ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಪತ್ನಿ ವ್ಯಕ್ತಿಯೋರ್ವರು ಹಲ್ಲೆ ನಡೆಸಿದ್ದರಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
ಹಲ್ಲೆ ನಡೆಸಿದ್ದಾರೆ ಎನ್ನಲಾದ ವ್ಯಕ್ತಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



