Home Kundapura News ರಸ್ತೆ ಬದಿ ನಿಂತಿದ್ದ ಮಹಿಳೆಗೆ ಬೈಕ್ ಢಿಕ್ಕಿ : ಆಸ್ಪತ್ರೆಗೆ ದಾಖಲು…!!

ರಸ್ತೆ ಬದಿ ನಿಂತಿದ್ದ ಮಹಿಳೆಗೆ ಬೈಕ್ ಢಿಕ್ಕಿ : ಆಸ್ಪತ್ರೆಗೆ ದಾಖಲು…!!

ಕುಂದಾಪುರ : ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಸವಾರ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ಸಿದ್ದಾಪುರದ ಹೆಂಗವಳ್ಳಿ ಪೇಟೆಯಲ್ಲಿ ನಡೆದಿದೆ.

ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಸಾಧು (53) ಎಂಬವರಿಗೆ ಢಿಕ್ಕಿ ಹೊಡೆದಿದ್ದಾರೆ.

ಢಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಸಾಧು ಅವರನ್ನು ಸ್ಥಳೀಯರು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.