Home Crime ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವಿವಾಹಿತ ಆತ್ಮಹತ್ಯೆ…!!

ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವಿವಾಹಿತ ಆತ್ಮಹತ್ಯೆ…!!

ಮೂಡುಬಿದಿರೆ: ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವಿವಾಹಿತನೋರ್ವ ತಮ್ಮ ದರ್ಖಾಸಿನಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮಾರ್ನಾಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಡುಮಾರ್ನಾಡು ಗ್ರಾ. ಪಂಚಾಯತ್ ವ್ಯಾಪ್ತಿಯ ತಿರುಮಲಬೆಟ್ಟು ನಿವಾಸಿ ದಿ. ಮುತ್ತಯ್ಯ ಪೂಜಾರಿ ಅವರ ಪುತ್ರ ಅಗೋಟಿ ಯಾನೆ ರಮೇಶ್ (38) ಎಂದು ತಿಳಿದು ಬಂದಿದೆ.

ಈ ಕುರಿತು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.