ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ,ಅದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ನೆಲಮಂಗಲದ ಮಲ್ಲರಬಾಣವಾಡಿ ಬಳಿ ನಡೆದಿದೆ..
ನೆಲಮಂಗಲ ತಾಲ್ಲೂಕಿನ ಶಾಂತಿನಗರ ನಿವಾಸಿ ಹಾಗೂ ಆಟೋ ಚಾಲಕ ಶ್ರೀನಿವಾಸ್(45), ಪುಟ್ಟಮ್ಮ(55), 13 ವರ್ಷದ ಬಾಲಕಿ ಮೃತಪಟ್ಟವರು ಎಂದು ತಿಳಿಯಲಾಗಿದೆ.
ವೆಂಕಟೇಶ್(37), ನಾಗರತ್ನಮ್ಮ(38), 11 ವರ್ಷದ ಬಾಲಕಿ ಗಂಭೀರ ಗಾಯಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.