Home Kundapura News ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್‌ ಅಂಬಾನಿ ಭೇಟಿ…!!

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್‌ ಅಂಬಾನಿ ಭೇಟಿ…!!

ಕೊಲ್ಲೂರು: ಖ್ಯಾತ ಉದ್ಯಮಿ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ರವಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ಅನಂತ್ ಅಂಬಾನಿ ಶನಿವಾರ (ಜೂ.13) ದೇವಸ್ಥಾನಕ್ಕೆ ಭೇಟಿ ನೀಡುವ ಬಗ್ಗೆ ದಿನಾಂಕ ನಿಗದಿಯಾಗಿತ್ತು. ಆದರೆ ಭಾರೀ ಮಳೆಯ ಕಾರಣ ಮುಂಬೈನಿಂದ ವಿಮಾನ ಪ್ರಯಾಣ ವ್ಯತ್ಯವಾದ ಹಿನ್ನೆಲೆ ಕೊಲ್ಲೂರು ಭೇಟಿಯನ್ನು ರವಿವಾರಕ್ಕೆ ನಿಗದಿಯಾಗಿತ್ತು. ರವಿವಾರ ಸಂಜೆ ತಮ್ಮ ಕುಟುಂಬದ ಗುರುಗಳೊಂದಿಗೆ ಅನಂತ್ ಅಂಬಾನಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ ಶೆಟ್ಟಿ ಗೌರವಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ಅಭಿಲಾಷ್, ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಆಲೂರು, ಸುರೇಂದ್ರ ಶೆಟ್ಟಿ, ಧನಾಕ್ಷಿ ವಿಶ್ವನಾಥ್ ಪೂಜಾರಿ, ಸುಧಾ ಬೈಂದೂರು ಇದ್ದರು.

ದೇವಸ್ಥಾನದ ವತಿಯಿಂದ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದೇವಳದ ತಂತ್ರಿಗಳಾದ ನಿತ್ಯಾನಂದ ಅಡಿಗ, ಪ್ರಧಾನ ಅರ್ಚಕರಾದ ರಾಮಚಂದ್ರ ಅಡಿಗ, ವಿಘ್ನೇಶ್ ಅಡಿಗ ಹಾಗೂ ಸುರೇಶ್ ಭಟ್ ಅವರ ಪೂಜೆ ನೆರವೇರಿಸಲಾಯಿತು.

ಉಡುಪಿ ಹೆಚ್ಚುವರಿ ಎಸ್‌ಪಿ ಸುಧಾಕರ ನಾಯಕ್, ಕುಂದಾಪುರ ಡಿವೈಎಸ್‌ಪಿ ಎಚ್.ಡಿ.ಕುಲಕರ್ಣಿ ನೇತೃತ್ವದಲ್ಲಿ ಬೈಂದೂರು ಸಿಪಿಐ ಶಿವಕುಮಾರ್, ಪಿಎಸೈಗಳಾದ ವಿನಯ್ ಕೊರ್ಲಹಳ್ಳಿ, ಭೀಮಾಶಂಕರ್ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದರು. ಜಿಲ್ಲಾ ಪೊಲೀಸ್ ಇಲಾಖೆಯ ಜೊತೆಗೆ ಅನಂತ್ ಅಂಬಾನಿ ಅವರ ಖಾಸಗಿ ಭದ್ರತಾ ತಂಡ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.