Home Kundapura News ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ

ಕೊಲ್ಲೂರು : ಪ್ರಧಾನಿ ನರೇಂದ್ರ ಮೋದಿ ಅವರ ಯಶಸ್ವಿ ಆಡಳಿತದ 12ನೇ ವರ್ಷದ ಅಂಗವಾಗಿ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಬೇಟಿ ನೀಡಿ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ,ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮೊದಲಾದವರು ಉಪಸ್ಥಿತರಿದ್ದರು.