ಕಾಪು, ಫೆಬ್ರವರಿ 05, 2026:ಕಾಪುವಿನ ಪೊಲಿಪು ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿ ನಿಲಯದಲ್ಲಿನ ಊಟೋಪಚಾರ ವ್ಯವಸ್ಥೆ ಹಾಗೂ ವಸತಿ ಸೌಲಭ್ಯಗಳ ಬಗ್ಗೆ ಶಾಸಕರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾಹಿತಿ ಪಡೆದುಕೊಂಡರು. ಅಲ್ಲದೆ, ವಿದ್ಯಾರ್ಥಿ ನಿಲಯದ ವಾರ್ಡನ್ ಅವರಿಂದ ವಸತಿ ವ್ಯವಸ್ಥೆ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರೋಷನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿ ನಿಲಯದ ವಾರ್ಡನ್ ಉಪಸ್ಥಿತರಿದ್ದರು.



