Home Crime 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

2002ರಲ್ಲಿ ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಸುಮಾರು 24 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲ್ಲೂಕಿನ ನಿವಾಸಿ ರೇವಣ ಸಿದ್ದ (57) ಎಂದು ಗುರುತಿಸಲಾಗಿದೆ.

 

ಈತ 2002ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

 

ಉಡುಪಿ ನಗರ ಠಾಣೆಯ ಪ್ರಭಾರ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿಗಳಾದ ಶಿವಕುಮಾರ್, ಹೇಮಂತ್ ಕುಮಾರ್ ಹಾಗೂ ಮಲ್ಲಯ್ಯ ಹಿರೇಮಠ ಅವರು ಮಂಡ್ಯ ಜಿಲ್ಲೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

 

ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.