Home Crime ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!!

ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!!

ಉಳ್ಳಾಲ : ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಸೋಮೇಶ್ವರದಲ್ಲಿ ಸಂಭವಿಸಿದೆ.

ಸೋಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಮನ್ವಿ (16) ಆತ್ಮಹತ್ಯೆಗೈದ ವಿದ್ಯಾರ್ಥಿನಿ.

ಮನೆಯಲ್ಲಿ ತಾಯಿ ಹಾಗೂ ಹಿರಿಯ ಸಹೋದರಿ ಇದ್ದಾಗ ಸ್ನಾನಕ್ಕೆಂದು ಕೋಣೆಗೆ ಸೇರಿದ ಅವರು ಎಷ್ಟು ಹೊತ್ತಾದರೂ ಹೊರಬಾರದೆ ಇದ್ದಾಗ ಮನೆ ಮಂದಿ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ನಡೆಸಿರುವುದು ಬೆಳಕಿಗೆ ಬಂದಿದೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಈಕೆ ಭರತನಾಟ್ಯ ಕಲಾವಿದೆಯಾಗಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.