Home Karavali Karnataka ಉಡುಪಿ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ…!!

ಉಡುಪಿ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ…!!

ಉಡುಪಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹುಟ್ಟುಹಬ್ಬ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಅಕ್ಟೋಬರ್ 26ರಂದು ಅಜ್ಜರಕಾಡು ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಬೆಳಿಗ್ಗೆ 8ರಿಂದ ಅಪರಾಹ್ನ 2.30ರ ವರೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನೂತನ ಸದಸ್ಯೆ ಡಾ.ಆರತಿ ಕೃಷ್ಣ, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಫೂರ್, ಗೇರುಬೀಜ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ ಪೂಜಾರಿ, ಬೀಜ ಮತ್ತು ಸಾವಯವ ಪ್ರಾಮಾಣಿಕರಣ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್ ದಾಸ್, ಕ್ರೈಸ್ತ ಅಭಿವೃದ್ಧಿ ನಿಗಮ ನಿರ್ದೇಶಕ ಪ್ರಶಾಂತ್ ಜತ್ತನ್ನ ಹಾಗೂ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಆರ್ಥಿಕ ಅಶಕ್ತರಾಗಿದ್ದು ಸ್ವ ಉದ್ಯಮದ ಹಂಬಲ ಹೊಂದಿರುವ ಆಯ್ದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ್ ಕಾಂಚನ್ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಗೌರವ ಅತಿಥಿಗಳಾಗಿದ್ದಾರೆ.

ಹೊಲಿಗೆ ಯಂತ್ರಗಳನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಿತರಿಸಲಿದ್ದಾರೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಡಾ.ಆರತಿ ಕೃಷ್ಣ ಸನ್ಮಾನಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತ ಪಿ. ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ ಭಾಗವಹಿಸಲಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡು ಬಂದಿದ್ದು, ತೀರಾ ಬಡತನದಲ್ಲಿರುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಸುಮಾರು 600 ಯುನಿಟ್’ಗಿಂತಲೂ ಹೆಚ್ಚು ರಕ್ತ ನೀಡಿದೆ. ಈ ಬಾರಿ ಉಡುಪಿ ಮತ್ತು ಬ್ರಹ್ಮಾವರ ಕಾಂಗ್ರೆಸ್ ಸಮಿತಿ ಸಂಯುಕ್ತ ಆಶ್ರಯದಲ್ಲಿ 250 ಯುನಿಟ್’ಗೂ ಅಧಿಕ ರಕ್ತ ಸಂಗ್ರಹಿಸಿ ನೀಡುವ ಗುರಿ ಹೊಂದಲಾಗಿದೆ.

ಆಸಕ್ತ ರಕ್ತದಾನಿಗಳು 9449894375 (ಸತೀಶ್ ಪುತ್ರನ್), 9611393707 (ಸಂಜಯ್ ಆಚಾರ್ಯ), 8971433504 (ಕುಮಾರ್ ಬೈಕಾಡಿ), 7019286654 (ಅನಿತಾ ಬಾಬು ಪೂಜಾರಿ) ಅವರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.