Home Crime ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ತನಿಖೆಗೆ ಹೈಕೋರ್ಟ್ ಅನುಮತಿ…!!

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ತನಿಖೆಗೆ ಹೈಕೋರ್ಟ್ ಅನುಮತಿ…!!

ಬೆಳ್ತಂಗಡಿ: ಧರ್ಮಸ್ಥಳ ಎಸ್ಐಟಿ ತನಿಖೆ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಮತ್ತು ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು, ತಿಮರೋಡಿ ವಿರುದ್ಧದ ‘ಸುಳ್ಳು ಸಾಕ್ಷಿ ನೀಡಲು ಬಲವಂತಪಡಿಸಿದ’ ಅಪರಾಧಕ್ಕೆ ಸಂಬಂಧಿಸಿದ ತನಿಖೆಗೆ ಮಧ್ಯಂತರ ತಡೆ ನೀಡಿದೆ.

ಆದರೆ, ‘ಜೀವ ಬೆದರಿಕೆ ಹಾಕಿದ’ ಅಪರಾಧದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಮುಂದುವರಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ.

ತನಿಖೆಗೆ ಅರ್ಜಿದಾರರು ಸಂಪೂರ್ಣವಾಗಿ ಸಹಕರಿಸಬೇಕು ಮತ್ತು ಇದರಲ್ಲಿ ವಿಫಲವಾದರೆ ಪೊಲೀಸರು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಅರ್ಜಿದಾರರ ಪರವಾಗಿ ಹೈಕೋರ್ಟ್ ವಕೀಲ ಎಂ.ಆರ್. ಬಾಲಕೃಷ್ಣ ಅವರು ನ್ಯಾಯಾಲಯದಲ್ಲಿ ಹಾಜರಾಗಿದ್ದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಸದ್ಯ ಮುಂದೂಡಿದೆ.