ಪುತ್ತೂರು : ಸುಮಾರು 9 ವರ್ಷಗಳ ಹಿಂದೆ ಗಂಟಲಿನ ಗಡ್ಡೆಯ ಶಸ್ತ್ರಚಿಕಿತ್ಸೆಯ ಬಳಿಕ ವ್ಯಕ್ತಿಯೊಬ್ಬರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ನಿರ್ಲಕ್ಷ್ಯದ ಆರೋಪ ಎದುರಿಸುತ್ತಿದ್ದ ವೈದ್ಯ ಡಾ। ಪ್ರಸಾದ್ ಭಂಡಾರಿ ಅವರನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶಿಸಿದೆ.
2017ರಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಾರ್ಣಪ್ಪ ಗೌಡ ಅವರ ಗಂಟಲಿನ ಗಡ್ಡೆಯ ಶಸ್ತ್ರಚಿಕಿತ್ಸೆ ನಡೆದ ಬಳಿಕ ಅವರು ಮೃತಪಟ್ಟಿದ್ದರು. ಈ ಕುರಿತು ಅವರ ಮನೆಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಪುತ್ತೂರಿನ ಪ್ರ.ಹಿ. ವ್ಯವಹಾರಿಕ ನ್ಯಾಯಾಲಯ ವೈದ್ಯರನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದೆ.




