Home Crime ಕುಂದಾಪುರದಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

ಕುಂದಾಪುರದಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

ಕುಂದಾಪುರ, ಜೂನ್ 17: ಜೀವನದಲ್ಲಿ ಜಿಗುಪ್ಸೆಗೊಂಡು ವಿಷಪದಾರ್ಥ ಸೇವಿಸಿದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.

ಪೊಲೀಸರ ಮಾಹಿತಿಯಂತೆ, ಹೊಸಮನೆ, ಕಾಲ್ತೋಡು ಗ್ರಾಮದ ನಿವಾಸಿ ಶೇಖರ ಶೆಟ್ಟಿ (57) ಅವರು ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್ 16ರಂದು ಮಧ್ಯಾಹ್ನ ಸುಮಾರು 2.45 ಗಂಟೆಗೆ ವಿಷಪದಾರ್ಥ ಸೇವಿಸಿ ಮನೆಗೆ ಬಂದಿರುವುದಾಗಿ ತಿಳಿದುಬಂದಿದೆ.

ಅವರನ್ನು ತಕ್ಷಣವೇ ಕೋಟೇಶ್ವರದ ಎನ್.ಆರ್. ಆಚಾರ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಸಂಜೆ ಸುಮಾರು 5.30 ಗಂಟೆಗೆ ಪರೀಕ್ಷಿಸಿದಾಗ ಶೇಖರ ಶೆಟ್ಟಿ ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರ ಅಣ್ಣ ಚಂದ್ರಶೇಖರ ಶೆಟ್ಟಿ (87) ಅವರು ನೀಡಿದ ಮಾಹಿತಿಯ ಆಧಾರದಲ್ಲಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.