Home Crime ಶಿರ್ವ ಠಾಣೆಯ ಎಎಸ್ಸೈ ಪುತ್ರಿ ಸಾವು…!!

ಶಿರ್ವ ಠಾಣೆಯ ಎಎಸ್ಸೈ ಪುತ್ರಿ ಸಾವು…!!

ಉಡುಪಿ: ನಗರದ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.26ರಂದು ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ‌

ಮೃತರನ್ನು ಶಿರ್ವ ಪೊಲೀಸ್ ಠಾಣಾ ಎಎಸ್ಸೈ ಸುದೇಶ್ ಶೆಟ್ಟಿ ಅವರ ಮಗಳು ಸ್ಪರ್ಷ (24) ಎಂದು ತಿಳಿಯಲಾಗಿದೆ. ಮೃತರ ತಾಯಿ ಶರ್ಮಿಳಾ (49) ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸವಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಗಾಯಗೊಂಡ ಶರ್ಮಿಳಾ ಮತ್ತು ಸ್ಪರ್ಷ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸ್ಪರ್ಷ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.