Home Crime ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಜಪ್ತಿ : ಓರ್ವ ಆರೋಪಿ ಅರೆಸ್ಟ್…!/

ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಜಪ್ತಿ : ಓರ್ವ ಆರೋಪಿ ಅರೆಸ್ಟ್…!/

ಕಾಸರಗೋಡು: ‘ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಟಣದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾಗಿದೆ. ಮಧೂರು ಪಟ್ಟ ದ ಕೆ. ಇಬ್ರಾಹಿಂ ಬಾತ್ತಾ (36) ಬಂಧಿತ ಆರೋಪಿ. ನಿಷೇಧಿತ ಪಾನ್ ಮಸಾಲ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಟ್ಟ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರು ಪೊಲೀಸರ ಗಮನಕ್ಕೆ ಬಂದಿದೆ. ಕಾರಿನ ಗ್ಲಾಸ್ ಗಮನಿಸಿದಾಗ ಪ್ಲಾಸ್ಟಿಕ್ ಚೀಲಗಳು ಇರುವುದು ಕಂಡುಬಂದಿದ್ದು, ಸಂಶಯ ಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ ನಿಷೇಧಿತ ತಂಬಾಕು ಉತ್ಪನ್ನಗಳು ಪತ್ತೆಯಾಗಿವೆ.

‘ಆಪರೇಷನ್ ತೂಫಾನ್’ ವಿಶೇಷ ಕಾರ್ಯಾಚರಣೆಯ ಅಂಗವಾಗಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ತಂಬಾಕು ಉತ್ಪನ್ನ ಪತ್ತೆಯಾಗಿದೆ.