ಬೆಂಗಳೂರು : ಸಾವಿರಾರು ಕೋಟಿ ರೂಪಾಯಿ ಹಗರಣದಲ್ಲಿ ಬಂಧಿತರಾಗಿದ್ದ ಶಿವಾನಂದ ನೀಲಣ್ಣವರ್ ಅವರಿಗೆ ಜಾಮೀನು ಮಂಜೂರಾಗಿದ್ದು, ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು.
ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನ್ಯಾಯಾಲಯ ಜಾಮೀನಿಗೆ ಹಲವು ಷರತ್ತುಗಳನ್ನು ವಿಧಿಸಿದ್ದು ಜೂನ್ 27 ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೆ ಮೂರು ಲಕ್ಷ ರೂಪಾಯಿ ಬಾಂಡ್ ಶೂರಿಟಿ ಜೊತೆಗೆ ಓರ್ವ ಜಾಮೀನುದಾರರನ್ನು ಒದಗಿಸುವುದು ತನಿಖಾಧಿಕಾರಿಗೆ ಸಹಕರಿಸುವುದು ಹಾಗೂ ದೇಶ ತೊರೆಯಬಾರದು ಎಂಬ ಷರತ್ತುಗಳನ್ನು ವಿಧಿಸಿ ಮಧ್ಯಂತರ ಜಾಮೀನು ನೀಡಲಾಗಿದೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಶಿವಾನಂದ ನೀಲಣ್ಣವರ್ ಓಂ ನಮಃ ಶಿವಾಯ ಎಲ್ಲರಿಗೂ ಒಳ್ಳೆಯದಾಗಬೇಕು ಎಂದು ಬಯಸುವ ವ್ಯಕ್ತಿ ನಾನು. ಬೇರೆ ಏನು ಹೇಳುವುದಿಲ್ಲ ಎಂದು ಹೇಳಿ ತೆರಳಿದ್ದಾರೆ.




