Home Crime ಕಾರ್ಕಳದಲ್ಲಿ ವ್ಯಕ್ತಿ ಆತ್ಮಹತ್ಯೆ…!!

ಕಾರ್ಕಳದಲ್ಲಿ ವ್ಯಕ್ತಿ ಆತ್ಮಹತ್ಯೆ…!!

ಸಾಂದರ್ಭಿಕ ಚಿತ್ರ

ಕಾರ್ಕಳ:  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುಡ್ಕೂರು ಗ್ರಾಮದ ನಿವಾಸಿ ರಮೇಶ್ ಸಫಲಿಗ (59) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದು, ಇದೇ ಕಾರಣದಿಂದ ಮನನೊಂದು ದಿನಾಂಕ 16 ಜೂನ್ 2026ರಂದು ರಾತ್ರಿ 9.30 ರಿಂದ 10 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಬಾತ್‌ರೂಮ್‌ನ ಮೇಲ್ಚಾವಣಿಯ ಕಬ್ಬಿಣದ ರಾಡಿಗೆ ನೈಲಾನ್ ಹಗ್ಗ ಕಟ್ಟಿ ಅದರ ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಮೃತರ ಪುತ್ರ ಭರತ್ ಕೆ. ಸಫಲಿಗ (26) ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 30/2026ರಂತೆ ಕಲಂ 194 ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.